March 16, 2026

ಉಳ್ಳಾಲ: ಹಳಿ ದಾಟುತ್ತಿದ್ದಾಗ ರೈಲು ಢಿಕ್ಕಿ: ಬಿಹಾರ ಮೂಲದ ವ್ಯಕ್ತಿ ಮೃತ್ಯು

0
IMG-20230521-WA0003.jpg

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿರೈಲು ಢಿಕ್ಕಿ ಹೊಡೆದ ಪರಿಣಾಮ ಹಳಿ ದಾಟುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ

ಕಲ್ಕಟ್ಟದಲ್ಲಿ ಕೆಲಸ ಮುಗಿಸಿ ತೊಕ್ಕೊಟ್ಟುವಿನಲ್ಲಿರುವ ನಿವಾಸಕ್ಕೆ ಶ್ರವಣ್ ದಾಸ್ ಬಂದಿದ್ದು, ಈ ವೇಳೆ ಸಾಂಬಾರ್ ತರಲೆಂದು ಹೊಟೇಲ್ ಗೆ ಹೋಗಿ ವಾಪಸ್ ರೈಲ್ವೆ ಹಳಿ ದಾಟಿ ಬರುವಾಗ ರೈಲು ಢಿಕ್ಕಿ ಹೊಡೆದಿದೆ.

ಇನ್ನು ರೈಲು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶ್ರವಣ್ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಿಸೆಯಲ್ಲಿ ದೊರೆತ ಆಧಾರ್ ಕಾರ್ಡ್ ಮೂಲಕ ಗುರುತು ಪತ್ತೆ ಹಚ್ಚಿದ್ದಾರೆ.

Leave a Reply

Your email address will not be published. Required fields are marked *

error: Content is protected !!