March 16, 2026

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಬೈಕ್ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತ್ಯು

0
IMG-20230521-WA0036.jpg

ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ನಡೆದಿದೆ.

ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟೇ ನಡೆಸುತ್ತಿದ್ದ ವೇಣುಗೋಪಾಲ್ (45) ಮೃತ ವ್ಯಕ್ತಿ.

ಮೂಲತಃ ಉತ್ತರ ಕರ್ನಾಟಕ ಮೂಲದ ವೇಣುಗೋಪಾಲ್ ಅವರು ಮೂಡಿಗೆರೆಯಲ್ಲಿ ಮದುವೆಯಾಗಿ ಇಲ್ಲೇ ವಾಸವಿದ್ದು,ಹೋಂ ಸ್ಟೇ ಜೊತೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ಇಟ್ಟುಕೊಂಡಿದ್ದರು.

ಆಲ್ದೂರು ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

error: Content is protected !!