March 16, 2026

ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಊಟ, ತಿಂಡಿ ಲಭ್ಯ: ಸಿದ್ದರಾಮಯ್ಯ

0
20230521_183709.jpg

ಬೆಂಗಳೂರು: ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ನಲ್ಲಿ ರುಚಿಕರವಾದ ಊಟ, ತಿಂಡಿ ಜನರಿಗೆ ಲಭ್ಯವಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಮುಚ್ಚಿವೆ, ಹಲವು ಮುಚ್ಚುವ ಸ್ಥಿತಿಯಲ್ಲಿವೆ ಎಂದು ಕಿಡಿಕಾರಿದ್ದಾರೆ.

“ಗರೀಬಿ ಹಟಾವೋ” ಘೋಷಣೆಯ ಮೂಲಕ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ ಮಾಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟಿನ್ ಗಳನ್ನು ಮುಚ್ಚಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯ ಸಂಪನ್ಮೂಲ ಒದಗಿಸಿ ಅವುಗಳನ್ನು ಪುನಶ್ಚೇತನಗೊಳಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ.
ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಸ್ವಸ್ಥ ಮತ್ತು ರುಚಿಕರವಾದ ಊಟ-ತಿಂಡಿಗಳೊಂದಿಗೆ ಜನರ ಸೇವೆ ಶುರುಮಾಡಲಿವೆ.
ಹಸಿದವರ ಪಾಲಿಗೆ ಅನ್ನವೇ ದೇವರು.. ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!