March 16, 2026

ಮಳೆ ನೀರಿನಲ್ಲಿ ನಟ ಜಗ್ಗೇಶ್‌ ದುಬಾರಿ ಕಾರು ಮುಳುಗಡೆ

0
image_editor_output_image-1031291158-1684734262797.jpg

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಮಳೆಯಿಂದಾಗಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರ ದುಬಾರಿ ಕಾರು ಮುಳುಗಡೆ ಆಗಿದೆ.

ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದಲೇ ಮಳೆಯ ಆರ್ಭಟ ಜೋರಾಗಿತ್ತು. ಕೆ.ಆರ್.ಸರ್ಕಲ್‌, ಮಹಾಲಕ್ಷ್ಮೀ ಲೇಔಟ್‌ ಸೇರಿದಂತೆ ಹಲವು ಪ್ರದೇಶದಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.

ಇತ್ತ ನಟ, ರಾಜ್ಯಸಭಾ ಸದಸ್ಯರೂ ಆಗಿರುವ ಜಗ್ಗೇಶ್‌ ಅವರ ಐಷಾರಾಮಿ ಕಾರೊಂದು ಮಳೆಯ ನೀರಿನಲ್ಲಿ ಮುಳುಗಿ ಹೋಗಿದೆ. ಈ ಬಗ್ಗೆ ಸ್ವತಃ ಜಗ್ಗೇಶ್‌ ಅವರೇ ಟ್ವೀಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!