March 16, 2026

‘ಪುತ್ತಿಲ ಪರಿವಾರ’ ಅಸ್ತಿತ್ವಕ್ಕೆ, ಲಾಂಚನ ಬಿಡುಗಡೆ: BJP, RSSಗೆ ಕಂಟಕವಾದ ಅರುಣ್ ಪುತ್ತಿಲ ನಡೆ

0
image_editor_output_image520412530-1684734885159.jpg

ಪುತ್ತೂರು: ಪುತ್ತೂರಿನ ಬಿಜೆಪಿ ಬಂಡಾಯ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲಿಗರಿಂದ ‘ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆದ ಎಂಬ ಬ್ರಹತ್‌ ಪಾದಯಾತ್ರೆ ಹಾಗೂ ‘ಸೇವಾ ಸಮರ್ಪಣಾ’ ಕಾರ್ಯಕ್ರಮ ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ BJP, RSS ವಿರುದ್ಧವೇ ‘ಪುತ್ತಿಲ ಪರಿವಾರ’ ಲಾಂಚನ ಬಿಡುಡೆಗೊಳಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ,ದೈವ ಬಲ ಇರುವ ಕಾರಣಕ್ಕೆ ಪುತ್ತಿಲ ಅವರಿಗೆ ಈ ರೀತಿಯಾದ ಜನರ ಪ್ರೀತಿ ಬೆಂಬಲ ಸಿಕ್ಕಿದೆ. ಅಭ್ಯರ್ಥಿಗಳು ಹಣ ಹಂಚುವ ದಿನದಲ್ಲಿ ಮತದಾರ ಹಣ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪುತ್ತಿಲ ಹಲವು ಇತಿಹಾಸ ಸೃಷ್ಟಿಸಿದ್ದಾರೆ ಎಂದರು.

ಹಿಂದೂ ಸಂಘಟನೆ ಒಡೆದು ಹೋಗಬಾರದು ಎಂಬ ನಿಟ್ಟಿನಲ್ಲಿ ‘ಪುತ್ತಿಲ ಪರಿವಾರ’ ಸಂಘಟನೆ ಕಾರ್ಯೋನ್ಮುಖವಾಗಲಿದೆ. ಗುರು ಗೋಳ್ವಾಳ್ಕರ್‌ ಯೋಚನೆಯಂತೆ ಯಾವುದೇ ಸಂಘಟನೆಗಳಿಗೆ ಅಪಮಾನವಾಗದಂತೆ ಆರ್‌ಎಸ್‌ಎಸ್‌ಗೆ 100 ವರ್ಷಗಳಾಗುವ ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಗೋಳ್ವಾಳ್ಕರ್‌ ಆಶಯಕ್ಕೆ ಪೂರಕವಾಗಿ ಯಾರನ್ನೂ ದೂಷಿಸದೆ ಸಮಾಜ ಕಟ್ಟುವ ಕೆಲಸ ಮಾಡಲಿದೆ ಎಂದು ವಿವರಿಸಿದರು.

ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ, ಆದರೆ ಹಣ ಹಂಚಿಕೆ, ಅಪಪ್ರಚಾರ ಇನ್ನಿತರ ವಾಮಮಾರ್ಗದ ಕಾರಣದಿಂದಾಗಿ ನಮಗೆ ಸಣ್ಣ ಅಂತರದಿಂದ ಚುನಾವಣೆಯಲ್ಲಿ ಸೋಲಾಯಿತು. ಮೇಲಿನ ಸ್ಥಾನದಲ್ಲಿ ಕುಳಿತಿದ್ದ ನಾಯಕರು ಮಾಡಿದ ತಪ್ಪು ನಿರ್ಧಾರದಿಂದಾಗಿ ಹಿಂದೂ ಸಮಾಜಕ್ಕೆ ಶಕ್ತಿ ಕೊಡಬೇಕಾದ ನಾವು ಶಕ್ತಿ ಕಳೆದುಕೊಂಡೆವು ಎಂದರು.

Leave a Reply

Your email address will not be published. Required fields are marked *

error: Content is protected !!