March 16, 2026

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ‌ಹೊಡೆದ ವಾಹನ

0
image_editor_output_image1237451823-1684743012625.jpg

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂಡಾರು ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದಾಗ ಬೊಲೋರೋ ಜೀಪು ನಸುಕಿನ ಜಾವ 4 ಗಂಟೆಯ ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು.

ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!