March 16, 2026

ಹಿರಿಯ ನಟ ಶರತ್ ಬಾಬು ನಿಧನ

0
IMG-20230522-WA0027.jpg

ಹೈದರಾಬಾದ್: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಶರತ್ ಬಾಬು(73 ) ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಶರತ್ ಬಾಬು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕಿಡ್ನಿ, ಲಿವರ್ ಸೇರಿದಂತೆ ಅವರ ಅಂಗಾಂಗಗಳು ಬಾಧಿತವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇನ್ನು ಶರತ್‌ಬಾಬು ಸುಮಾರು 50 ವರ್ಷಗಳಿಂದ 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದು, ಕನ್ನಡ ತಮಿಳು, ತೆಲುಗು ಮತ್ತು ಇತರ ಭಾಷೆಗಳಲ್ಲಿ ನಾಯಕ, ಖಳನಟ, ಪೋಷಕ ಪಾತ್ರಧಾರಿಯಾಗಿ ನಟಿಸಿದ್ದಾರೆ.

ಶರತ್‌ಬಾಬು ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!