March 16, 2026

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ನಿಧನ

0
IMG-20230522-WA0034.jpg

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌‌ಎಸ್‌) ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ (61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.

ಆರ್‌ಎಸ್‌‌ಎಸ್‌ನಲ್ಲಿ ಮಾತ್ರವಲ್ಲದೆ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು, ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!