June 10, 2026

ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಯು.ಟಿ ಖಾದರ್?

0
UTK_vb_31.jpeg

ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.

ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ಕೊನೆ ಗಳಿಗೆಯಲ್ಲಿ ಯು ಟಿ ಖಾದರ್ ಅವರನ್ನು ವಿಧಾನ ಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಜೊತೆಗೂ ಖಾದರ್ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಮಂಗಳವಾರ 11. 30ಕ್ಕೆ ಯು ಟಿ ಖಾದರ್ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ ಕೆ ಶಿವಕುಮಾರ್ ಅವರು ನಾಮಪತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!