ಮಸೀದಿಗೆ ನುಗ್ಗಿ ಬೆಲೆಬಾಳುವ ಕಂಪ್ಯೂಟರ್, ಕ್ಯಾಮೆರಾ ಕಳವು
ಹಾಸನ: ಉಪಕರಣಗಳ ಸಮೇತ ಮಸೀದಿಗೆ ನುಗ್ಗಿದ ಖತರ್ನಾಕ್ ಕಳ್ಳ ಕಚೇರಿಯಲ್ಲಿದ್ದ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದಿರುವ ಘಟನೆ ಹಾಸನ ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ.
ತಡರಾತ್ರಿ ಖುಬಾ ಮಸೀದಿಗೆ ಬಂದಿರುವ ಕಳ್ಳ ಕೆಲಕಾಲ ಹೊಂಚು ಹಾಕಿದ್ದಾನೆ. ನಂತರ ಗೇಟ್ ಹಾರಿ ಒಳಬಂದಿರುವ ಚೋರ ಮಸೀದಿಯ ಮುಖ್ಯದ್ವಾರದ ಬೀಗ ಮುರಿದು ಹುಂಡಿ ಕದಿಯಲು ಯತ್ನಿಸಿದ್ದಾನೆ.
ಇದು ಸಾಧ್ಯವಾಗದಿದ್ದಾಗ ಮಸೀದಿಯ ಕಚೇರಿಯ ಬೀಗ ಮುರಿದು ಒಳ್ಳನುಗ್ಗಿದ್ದಾನೆ. ಅಲ್ಲಿದ್ದ ಕಂಪ್ಯೂಟರ್ ಹಾಗೂ ಕೆನಾನ್ ಕ್ಯಾಮೆರಾವನ್ನು ಕದ್ದೊಯ್ದಿದ್ದಾನೆ.




