March 16, 2026

ಸ್ವೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ: ನಾಳೆ ಚುನಾವಣೆ

0
image_editor_output_image894066643-1684822751571.jpg

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷರಾಗಲು ಮಂಗಳೂರು ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.

ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಹೈಕಮಾಂಡ್ ಯು.ಟಿ. ಖಾದರ್ ಅವರಿಗೆ ಮನವಿ ಮಾಡಿದ್ದು, ಮನವಿಗೆ ಮಂಗಳೂರು ಶಾಸಕ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ.

Leave a Reply

Your email address will not be published. Required fields are marked *

error: Content is protected !!