ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆ
ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಬುಧವಾರ ಆಯ್ಕೆಯಾಗಿದ್ದಾರೆ.
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು.
ಮುಖ್ಯಮಂಚ್ಕಿದಶ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ಇದರಂತೆ ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಆಯ್ಕೆಗೊಂಡರು.
ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಅಭಿನಂದನೆ ಸಲ್ಲಿಸಿದರು.




