ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ದೂರು
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಮೇಲೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಿಂದ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.
ದೂರಿನಲ್ಲೇನಿದೆ? ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದಿನಾಂಕ 22.05.2023 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು. ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ನಮಿತ ಕೆ ಪೂಜಾರಿ ಉಪಾಧ್ಯಕ್ಷರಾದ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಸಿಂಧೂ ಡಿನ್ನಿಸ್, ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ, ಕುಸುಮ ಮಾಚಾರು ಉಪಸ್ಥಿತರಿದ್ದರು.