March 16, 2026

ಬೆಳ್ತಂಗಡಿ: ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆ: ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

0
harish-new.jpg

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ದ ಪ್ರಕರಣ ದಾಖಲಾಗಿದೆ.


ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.


ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!