ಪೊಲೀಸರು ವಶಕ್ಕೆ ಪಡೆಯುತ್ತಿದ್ದ ವೇಳೆ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ
ಬೆಂಗಳೂರು: ಪೊಲೀಸರು ವಶಕ್ಕೆ ಪಡೆಯುತ್ತಿದ್ದ ವೇಳೆ ಯುವಕನೊಬ್ಬ ಮಹಡಿಯಿಂದ ಬಿದ್ದು ಮೃತಪಟ್ಟಿರುವ ವಿಚಿತ್ರ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೊಹಮ್ಮದ್ ಹುಸೇನ್(31) ಸಾವನ್ನಪ್ಪಿದ ಯುವಕ. ಪ್ರಕರಣವೊಂದರ ಸಂಬಂಧ ವಿಚಾರಣೆ ನಡೆಸಿ ವಶಕ್ಕೆ ಪಡೆಯಲೆಂದು ಪೊಲೀಸರು ಈತನ ಮನೆಗೆ ತೆರಳಿದ್ದರು. ಈ ವೇಳೆ ಅನಾಹುತ ನಡೆದಿದೆ. ಬೊಮ್ಮನಹಳ್ಳಿ ಬೇಗೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಮನೆಯಲ್ಲಿದ್ದ ಮಹಮ್ಮದ್ ಹುಸೇನ್‍ನನ್ನು ವಶಕ್ಕೆ ಪಡೆಯಲೆಂದು ನಾಲ್ವರು ಪೊಲೀಸರ ತಂಡ ತೆರಳಿತ್ತು. ಅಂತೆಯೇ ಮನೆಯ ನಾಲ್ಕನೇ ಮಹಡಿಯ ಟೇರೆಸ್ ನಲ್ಲಿ ವಶಕ್ಕೆ ಪಡೆಯುತ್ತಿದ್ದ ವೇಳೆ ಯುವಕ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ.





