March 16, 2026

ಬೆಳ್ತಂಗಡಿ: ಮನೆಗೆ ತೆರಳುತ್ತಿದ್ದಾಗ ಬೈಕ್‌ಗೆ ಕಾರು ಢಿಕ್ಕಿ: ಕೆಎಸ್ಸಾರ್ಟಿಸಿ ಚಾಲಕ ಮೃತ್ಯು

0
image_editor_output_image1891941513-1684966183586.jpg

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಚಾಲಕರೊಬ್ಬರ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ಗೆ ಕಾರು ಢಿಕ್ಕಿಯಾದ ಪರಿಣಾಮ ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೇ 18 ರಂದು ಬೆಳಗ್ಗೆ ಕರ್ತವ್ಯ ಮುಗಿಸಿ ಬೈಕಿನಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಕೊಕ್ಕಡ ಸಮೀಪದ ಕುಡಲ್‌ ಎಂಬಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!