March 16, 2026

ಆರೋಪಿಯ ಜಾಮೀನು ಸ್ವೀಕರಿಸಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ

0
image_editor_output_image321350947-1684967904161.jpg

ಬೆಂಗಳೂರು: ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಹಿಳಾ ಪಿಎಸ್ಐ ಅವರನ್ನ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡು ವಶಕ್ಕೆ ಪಡೆದಿದ್ದಾರೆ‌.

ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ ಎಂಬುದಾಗಿ ತಿಳಿದುಬಂದಿದೆ.

ವಶದಲ್ಲಿದ್ದ ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು ಐವತ್ತು ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಸವಿತಾಗೆ ಆರೋಪಿಯ ಕಡೆಯವರು ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದಿದ್ದರು. ಅಂತಿಮವಾಗಿ ಹದಿನೈದು ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಸವಿತಾ ವಿರುದ್ಧ ಆರೋಪಿ ಕಡೆಯವರಾದ ಅನಂತ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಇಂದು ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯಕ್ತ ಅಧಿಕಾರಿಗಳು ಹಣ ಸ್ವೀಕರಿಸುವಾಗಲೇ ಪಿಎಸ್ಐ ಸವಿತಾರನ್ನ ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!