ನಿಂತಿದ್ದ ಬಸ್‌ಗೆ ಟಿಟಿ ವಾಹನ ಢಿಕ್ಕಿ: ಇಬ್ಬರು ಮೃತ್ಯು, ನಾಲ್ಕು ಮಂದಿಗೆ ಗಾಯ
ತುಮಕೂರು: ನಿಂತಿದ್ದ ಬಸ್‌ಗೆ ಟಿಟಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರು ದುರ್ಗ ಹೋಬಳಿಯ ಡಿ.ಹೊಸಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು, ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿ ಟಿಟಿ ಚಾಲಕ ವೀರೇಶ್ (30), ಶಶಿಕಲಾ (69) ಸಾವನ್ನಪ್ಪಿದ್ದಾರೆ. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷ ಎಂಬವರು ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.





