March 16, 2026

ಉಚ್ಚಿಲ: ಬಡಾ ಗ್ರಾಮ ಪಂಚಾಯತ್ ನ ತ್ಯಾಜ್ಯ ಘಟಕಕ್ಕೆ ಬೆಂಕಿ: 8 ಲಕ್ಷ ರೂ. ಗೂ ಅಧಿಕ ನಷ್ಟ

0
20230525_205023.jpg

ಉಚ್ಚಿಲ: ಇಲ್ಲಿನ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಗುರುವಾರ ಮಧ್ಯಾಹ್ನ 4:00 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ 8 ಲಕ್ಷಕ್ಕೂ ಅಧಿಕ ಆಸ್ತಿಗಳ ಬೆಂಕಿಗೆ ಆಹುತಿಯಾಗಿದೆ.

ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ ಸುಮಾರು 4 ಲಕ್ಷದ 60 ಸಾವಿರ ಎಂದು ಪಿಡಿಓ ಸತೀಶ್ ಹೇಳಿದ್ದಾರೆ.

ಅದೇ ರೀತಿಯ ಕಟ್ಟಡ ಇತರೆ ಪರಿಕರಗಳು ಸೇರಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿದೆ ಎಂದು ಪಿಡಿಓ ಸತೀಶ.
ಘಟನಾ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!