ಮಹಿಳೆಯನ್ನು ಬರ್ಬರವಾಗಿ ಕೊಲೆಗೈದು ದೇಹವನ್ನು ಫ್ರಿಡ್ಜ್ ನಲ್ಲಿಟ್ಟ ಆರೋಪಿ
ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಮಹಿಳಾ ಪಾರ್ಟ್ ನರ್‌ಳನ್ನು ಬರ್ಬರವಾಗಿ ಕೊಲೆ ಮಾಡಿ, ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟ ಆಘಾತಕಾರಿ ಘಟನೆ ನಡೆದಿರುವುದು ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
ಮೃತಳನ್ನು ಅನುರಾಧ ರೆಡ್ಡಿ(55) ಎಂದು ಗುರುತಿಸಲಾಗಿದೆ. ಈಕೆಯನ್ನು ಚಂದ್ರ ಮೋಹನ್(48) ಕೊಲೆ ಮಾಡಿದ್ದಾನೆ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಅನುರಾಧಳನ್ನು ಆರೋಪಿ ಚಂದ್ರ ಮೋಹನ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ ಆಕೆಯ ದೇಹವನ್ನು ವಿಲೇವಾರಿ ಮಾಡುವ ಸಲುವಾಗಿ ಹಲವು ತುಂಡುಗಳನ್ನಾಗಿ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.





