February 3, 2026

ಮಾಜಿ ಮುಖ್ಯಮಂತ್ರಿ ಮುಕುಲ್‌ ಸಂಗ್ಮಾ ಸೇರಿದಂತೆ 12 ಮಂದಿ ಕಾಂಗ್ರೆಸ್‌ ಶಾಸಕರು ಟಿಎಂಸಿ ಸೇರ್ಪಡೆ

0
Screenshot_2021-11-25-10-46-05-62_ae93b0d4e668ae3b9e42de29105ee7f0.jpg

ನವದೆಹಲಿ: ಮಾಜಿ ಮುಖ್ಯಮಂತ್ರಿ ಮುಕುಲ್‌ ಸಂಗ್ಮಾ ಸೇರಿದಂತೆ ಮೇಘಾಲಯದ ಹದಿನೆಂಟು ಕಾಂಗ್ರೆಸ್‌ ಶಾಸಕರ ಪೈಕಿ ಹನ್ನೆರಡು ಮಂದಿ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ (ಟಿಎಂಸಿ) ಬುಧವಾರ ಸೇರ್ಪಡೆಗೊಂಡಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಂಗ್ಮಾ ಅವರು ಕಾಂಗ್ರೆಸ್‌ನ ಹಿರಿಯ ಮುಖಂಡರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಹೊಸ ಶಾಸಕರ ಸೇರ್ಪಡೆಯಿಂದಾಗಿ ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!