ಮೂಡಿಗೆರೆ: ಮುಸ್ಲಿಂ ಮಹಿಳೆಯ ಮನೆಗೆ ನುಗ್ಗಿದ್ದ ಅನ್ಯಕೋಮಿನ ಯುವಕನಿಗೆ ಹಲ್ಲೆ
ಕೊಟ್ಟಿಗೆಹಾರ: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಅನ್ಯ ಕೋಮಿನ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಮೇ. 26 ರಂದು ನಡೆದಿದೆ.
ಅಜಿತ್ ಎಂಬ ಯುವಕನ ಮೇಲೆ ದಾಳಿ ನಡೆದಿದ್ದು, ಐದಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ.
ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ.




