September 20, 2024

ಸ್ಪೀಕರ್ ಯು.ಟಿಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಶ್ರೀರಾಮಸೇನೆಯ ಮುಖಂಡನ ವಿರುದ್ಧ ಕಾಂಗ್ರೆಸ್ ದೂರು

0

ಚಿಕ್ಕಮಗಳೂರು: ನೂತನ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶ್ರೀರಾಮಸೇನೆಯ ಮುಖಂಡನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬವರು ಯು.ಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಮಾಡಿದ್ದಾರೆ. ಅಲ್ಲದೆ ಕೋಮು ದ್ವೇಷ ಹಾಗೂ ಜನಾಂಗದ ನೋವಿಗೆ ಪ್ರೀತೇಶ್ ಕಾರಣರಾಗಿದ್ದಾರೆ. ಈ ರೀತಿ ಸಂವಿಧಾನಾತ್ಮಕ ಹುದ್ದೆಗೆ ಅಗೌರವ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಕ್ಷದ ಐಟಿ ಸೆಲ್‍ನ ಜಿಲ್ಲಾ ಕಾರ್ಯದರ್ಶಿ ಎಂಎಲ್‍ಎ ಮಂಜು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೋಸ್ಟ್‌ನಲ್ಲಿ ಏನಿತ್ತು?
ಸದನದಲ್ಲಿ ಮಾನ್ಯ ಸಭಾಧ್ಯಕ್ಷರೇ ಅನ್ನಬೇಕಾ? ಸಾಬಾಧ್ಯಕ್ಷರೇ ಅನ್ನಬೇಕಾ?’ ಎಂದು ಶ್ರೀರಾಮ ಸೇನೆ ಮುಖಂಡ ಬರೆದುಕೊಂಡಿದ್ದರು. ಅಲ್ಲದೆ ಯುಟಿ ಖಾದರ್ ಅವರ ಹೆಸರಿನಲ್ಲಿ ಟ್ಯಾಗ್ ಬಳಸಿ ಪೋಸ್ಟ್ ಮಾಡಲಾಗಿತ್ತು.

ಈ ಸಂಬಂಧ ಚಿಕ್ಕಮಗಳೂರು ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!