ಉಳ್ಳಾಲ: ಕಾರು, ಬೈಕ್ ನಡುವೆ ಅಪಘಾತ, ಬೈಕ್ ಸವಾರರಿಬ್ಬರಿಗೆ ಗಾಯ

ಉಳ್ಳಾಲ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ.
ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಮನದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಲ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲಾಗಿದೆ. ಘಟನೆ ಕುರಿತ ಸಿಸಿಟಿವಿ ದೃಶ್ಯ ಸೆರೆಯಾಗಿದೆ.