February 4, 2026

ನೂತನ ಸಂಸತ್ ಭವನದಲ್ಲಿ 75 ರೂ. ನಾಣ್ಯ, ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

0
IMG-20230528-WA0016.jpg

ನವದೆಹಲಿ: ನೂತನ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 75 ರೂ. ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ.

75 ರೂ. ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಹಾಗೂ ನಾಣ್ಯದ ಕೆಳಗಡೆ ಸತ್ಯಮೇವ ಜಯತೆ ಎಂದು ಬರೆಯಲಾಗಿದೆ.

ಇನ್ನು ಇಂದು ಬೆಳಗ್ಗೆ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, ಮಧ್ಯಾಹ್ನದ ನಂತರ 2ನೇ ಹಂತದ ಕಾರ್ಯಕ್ರಮ ರಾಷ್ಟ್ರಗೀತೆ ಮೂಲಕ ಆರಂಭಗೊಂಡಿದೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 75 ರೂನ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ.

75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ 75ರೂ ನಾಣ್ಯ ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!