March 25, 2026

ಕಡಬ: ಕಾಡಾನೆ ದಾಳಿ – ಓರ್ವ ವ್ಯಕ್ತಿಗೆ ಗಾಯ

0
IMG-20230528-WA0041.jpg

ಕಡಬ: ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಮತ್ತೆ ಕಾಡಾನೆ ದಾಳಿ ನಡೆಸಿದ್ದು ವ್ಯಕ್ತಿಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಲಸಕ್ಕೆ ಹೋಗುತ್ತಿದ್ದ ವೇಳೆ ವಿನಯಕುಮಾರ್ ಎಂಬ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಇನ್ನು ಗಾಯಗೊಂಡ ವಿನಯ್ ಅವರನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ.

ಪರಿಸರದಲ್ಲಿ ಎರಡು ಆನೆಗಳು ಇರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಲಭ್ಯವಾಗಿದೆ. ಗ್ರಾಮಸ್ಥರು, ಸುಬ್ರಹ್ಮಣ್ಯ-ಧರ್ಮಸ್ಥಳ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!