March 25, 2026

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ:
ಇಬ್ಬರು ಮಕ್ಕಳು ಸೇರಿ 6 ಜನ ಮೃತ್ಯು

0
accident.png

ಕುಷ್ಟಗಿ: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ನಡೆದಿದೆ.

ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎಂದು ಗುರುತಿಸಲಾಗಿದೆ.

ಕಾರು ವಿಜಯಪುರದಿಂದ ಬೆಂಗಳೂರಿಗೆ ತೆರಳುವಾಗ ಲಾರಿ ಢಿಕ್ಕಿ ಹೊಡೆ ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಲಾರಿಯ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದು ಸ್ಥಳೀಯರು ಹಾಗೂ ಪೊಲೀಸರು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!