ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪ: ಒಲಿಂಪಿಕ್ ಪದಕ ವಿಜೇತರ ಮೇಲೆ FIR ದಾಖಲು
ನವದೆಹಲಿ: ಭಾರತೀಯ ಕುಸ್ತಿ ಫಡೆರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಂಗೀತಾ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಸೇರಿದಂತೆ ಹಲವರ ವಿರುದ್ಧ IPC ಸೆಕ್ಷನ್ 147, 149, 186, 188, 332, 353 PDPP ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕ್ರೀಡಾಪಟುಗಳ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರಿಗೆ 7 ದಿನಗಳ ಬೇಕಾಯಿತು. ಆದ್ರೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಮ್ಮ ವಿರುದ್ಧ ಕೇಸ್ ದಾಖಲಿಸಲು 7 ಗಂಟೆಯೂ ಬೇಕಾಗಲಿಲ್ಲ. ಈ ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ? ತನ್ನ ದೇಶದ ಕ್ರೀಡಾಪಟುಗಳನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದನ್ನ ಕ್ರೀಡಾ ಜಗತ್ತೇ ನೋಡುತ್ತಿದೆ ಎಂದು ಸಾಕ್ಷಿ ಮಲಿಕ್ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.