‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭರವಸೆ
ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.
ಇನ್ನು ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.