ಕುತೂಹಲ ಮೂಡಿಸಿದ ವೈಎಸ್ ಶರ್ಮಿಳಾ ಮತ್ತು ಡಿ.ಕೆ ಶಿವಕುಮಾರ್ ಭೇಟಿ
ತೆಲಂಗಾಣ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಡೀ ದೇಶದ ಗಮನ ಸೆಳೆದಿದ್ದು, ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವಿರೋಧ ಪಕ್ಷಗಳು ಕರ್ನಾಟಕ ರಾಜಕಾರಣದ ಮೇಲೆ ಕುತೂಹಲದಿಂದ ನೋಡುತ್ತಿವೆ.
ತೆಲಂಗಾಣ ವೈ.ಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.
ಸೋಮವಾರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ವೈಎಸ್ ಶರ್ಮಿಳಾ ಡಿ.ಕೆ ಶಿವಕುಮಾರ್ ಅವರ ಜೊತೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಇನ್ನು ಇದೇ ವರ್ಷ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಉಭಯ ನಾಯಕ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಮೊನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಅನೇಕ ನಾಯಕರು ಭಾಗಿಯಾಗಿದ್ದರು. ಅನೇಕ ಮಂದಿ ಶುಭ ಕೋರಿದ್ದರು. ಇಂದು ತೆಲಂಗಾಣ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಸೋದರಿ ಶರ್ಮಿಳಾ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.