November 22, 2024

ಮೈಸೂರಿನಲ್ಲಿ ಭೀಕರ ಅಪಘಾತ: 10 ಮಂದಿ ಮೃತ್ಯು: ಮೃತರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
 

0

ಮೈಸೂರು: ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ ನರಸೀಪುರ ಬಳಿ 10 ಅಮಾಯಕರ ಸಾವಿಗೆ ಕಾರಣವಾದ ಭೀಕರ ಅಪಘಾತದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!