ಪುತ್ತೂರು: ಹಾಡಹಗಲೇ ಮನೆಯ ಬೀಗ ಮುರಿದು ಕಳ್ಳತನ

ಪುತ್ತೂರು: ಮನೆಯೊಂದರ ಬೀಗ ಮುರಿದು ಹಾಡಹಗಲೇ ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ.

ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.
ಬೆಳಿಗ್ಗೆ ಮನೆಯವರು ಬೀಗ ಹಾಕಿ ಕೆಲಸದ ನಿಮಿತ್ತ ಹೊರ ಹೋಗಿದ್ದು, ಮನೆ ಮಂದಿ ತಿರುಗಿ ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಯುತ್ತಿದೆ.