August 13, 2026

ಕಡಬ: ಗುಡುಗು ಸಹಿತ ಗಾಳಿ ಮಳೆ: ಕಾರುಗಳ‌ ಮೇಲೆ ಬಿದ್ದ ಹೆದ್ದಾರಿ ಬದಿಯ ಮರಗಳು

0
pro-2.webp

ಕಡಬ: ಸೋಮವಾರ ರಾತ್ರಿಯ ಗುಡುಗು ಸಹಿತ ಗಾಳಿ ಮಳೆಗೆ ಕಡಬ ತಾಲೂಕಿನ ನೆಟ್ಟಣ ಸಮೀಪ ಹೆದ್ದಾರಿ ಬದಿಯ ಮರಗಳು ಉರುಳಿ ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಸಂಭವಿಸಿದೆ.

ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಓಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ ಎಂದು ತಿಳಿದುಬಂದಿದೆ.

ಮರ ಕಾರಿನ ಮೇಲ್ಛಾವಣಿಗೆ ಬಿದ್ದು ಸಿಲುಕಿಕೊಂಡಿದೆ. ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್‌, ಅರಣ್ಯ, ಅಗ್ನಿಶಾಮಕ ದಳ, ಲೋಕೋಪಯೋಗಿ ಇಲಾಖೆ, ಸ್ಥಳೀಯಾಡಳಿತ, ಸ್ಥಳೀಯರ ನೆರವಿನಿಂದ ಮರಗಳ ತೆರವು ಕಾರ್ಯ ನಡೆಸಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!