ಪುತ್ತೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆಸ್ಪತ್ರೆಯಿಂದ ಬಿಡುಗಡೆ, ಪುರುಷರಕಟ್ಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಚೇತರಿಕೆಗೊಂಡು ಮೇ 29ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪುರುಷರಕಟ್ಟೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಯಕರ್ತರು ಇದೀಗ ಚೇತರಿಕೆಗೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಪುರುಷರಕಟ್ಟೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮವನ್ನು ಆಚರಿಸಿ ಗಾಯಾಳುಗಳನ್ನು ಕರೆದೊಯ್ಯಿದರು.