ಮಂಗಳೂರು ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಚಲಿಸಿದ ಕಾರು
ಮಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರೊಂದು ಚಲಿಸಿದ ಘಟನೆ ನ. 25 ರ ಗುರುವಾರ ಮುಂಜಾನೆ ನಡೆದಿದೆ.
ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಹೊರರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರುಮಲಗಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆಯಲ್ಲದೆ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ.
ಇದರಿಂದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳು ಕಾರ್ಮಿಕರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





