ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆಯ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ಬಂಟ್ವಾಳದಲ್ಲಿ ನಡೆಯಿತು.
ವೀಕ್ಷಕರಾಗಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಲತೀಫ್ ಪುತ್ತೂರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಬಗ್ಗೆ ಅವಲೋಕನ ನಡೆಸಿ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು ಹಾಗೂ ಪಕ್ಷದ ಹೋರಾಟ ರಾಜಕೀಯವನ್ನು ಎಂದಿನಂತೆ ಮುಂದುವರಿಸುವುದರೊಂದಿಗೆ
ಮುಂಬರಲಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಹೇಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು? ಬೂತ್ ಸಮಿತಿಗಳ ಬಲವರ್ದನೆಯ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರುಗಳಾದ ವಿಕ್ಟರ್ ಮಾರ್ಟಿಸ್, ಮಿಸ್ರಿಯಾ ಕಣ್ಣೂರು, ಪ್ರಧಾನ ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆ , ಅಶ್ರಫ್ ಅಡ್ಡೂರು ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್ ಶಾಕೀರ್ ಅಳಕೆಮಜಲು, ಹಾಗು ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.