ಉಳ್ಳಾಲ(ದಕ್ಷಿಣ ಕನ್ನಡ): ಸ್ಯಾಂಡಲ್‌ವುಡ್‌ನ ಡಿಂಪಲ್ ಬೆಡಗಿ ಎಂದೇ ಖ್ಯಾತರಾದ ಸಿನಿಮಾ ನಟಿ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.