ಮರಕ್ಕೆ ಡಿಕ್ಕಿ ಹೊಡೆದ ಹೊತ್ತಿ ಉರಿದ ಕಾರು: ದಂಪತಿ ಸೇರಿದಂತೆ ಕುಟುಂಬದ ನಾಲ್ವರು ಸಜೀವ ದಹನ
ಭೋಪಾಲ್: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇತ್ತೀಚಿಗೆ ಮದುವೆಯಾಗಿದ್ದ ದಂಪತಿ ಸೇರಿದಂತೆ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕಾರು ವೇಗವಾಗಿ ಬಂದು ಮರಕ್ಕೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹತ್ತಿಕೊಂಡು ಕಾರಿನಲ್ಲಿದ್ದ ಮೂವರು ಪುರುಷರು ಮತ್ತು ಒರ್ವ ಮಹಿಳೆ ಜೀವಂತವಾಗಿ ಸುಟ್ಟುಹೋಗಿದ್ದಾರೆ.
ಮದುವೆಗೆ ತೆರಳಿದ್ದ ಕುಟುಂಬಸ್ಥರು ಮನೆಗೆ ಹಿಂತಿರುಗುವ ವೇಳೆ ಘಟನೆ ನಡೆದಿದ್ದು, ಆರು ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿಗಳು ದುರಂತದಲ್ಲಿ ಸಾವನ್ನಪ್ಪಿದ್ದಾರೆ.




