February 2, 2026

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 83 ರೂ. ಕಡಿತ

0
image_editor_output_image1661668933-1685601624816.jpg

ನವದೆಹಲಿ: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್‌ ದರ ಗುರುವಾರ ₹83.50 ಕಡಿತಗೊಂಡಿದೆ.

ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್‌ ಬೆಲೆ ₹1773 ಆಗಿದೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಗುರುವಾರ ತನ್ನ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಗೃಹ ಬಳಕೆಯ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Leave a Reply

Your email address will not be published. Required fields are marked *

error: Content is protected !!