ಭಟ್ಕಳ: ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ
ಭಟ್ಕಳ: ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿ ಯಲ್ಲಿ ವರದಿಯಾಗಿದೆ.
ಮೃತ ಗುತ್ತಿಗೆದಾರನನ್ನು ಶಿರಾಲಿ ಮಣ್ಣಹೊಂಡ ನಿವಾಸಿ ದಿನೇಶ (28) ಎಂದು ಗುರುತಿಸಲಾಗಿದೆ.
ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ. ಬಾಕಡಕೇರಿ ಸ್ಮಶಾನದ ಸಮೀಪ ಗೇರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.




