March 24, 2026

ಮಂಗಳೂರು: 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

0
IMG-20230601-WA0018.jpg

ಮಂಗಳೂರು: ಪ್ರಕರಣವೊಂದರಲ್ಲಿ 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

420 ಕೇಸ್ ನ ಬಂಧಿತ ಆರೋಪಿಯನ್ನು, ಬಂಟ್ವಾಳದ ಮೇರಮಜಲು ಪಕ್ಕಾಲ ಪಡೆ ನಿವಾಸಿ ಜೇಸನ್ ಪೀಟರ್ ಡಿಸೋಜ (42) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೂ ಸಿಗದೇ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯವು LPC (long pending case) ಪ್ರಕರಣ ಎಂದು ವಾರಂಟ್ ಹೊರಡಿಸಿತ್ತು. ಎಸಿಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!