March 24, 2026

ಸುಬ್ರಹ್ಮಣ್ಯ: ರಸ್ತೆ ಬದಿ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

0
IMG-20230528-WA0015.jpg

ಸುಬ್ರಹ್ಮಣ್ಯ: ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.

ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದ ವಿದ್ಯಾರ್ಥಿನಿಯರು ವಲ್ಲೀಶ ಸಭಾಭವನದಲ್ಲಿ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ 7-8 ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ.

ಇನ್ನು ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಅವರನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದ್ದು, ಇನ್ನುಳಿದ 3-4 ವಿದ್ಯಾರ್ಥಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.

ಕಾರನ್ನು ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!