August 12, 2026

ಉಳ್ಳಾಲ: ಸೋಮೇಶ್ವರ ಬೀಚ್’ನಲ್ಲಿ ನೈತಿಕ ಪೊಲೀಸ್ ಗಿರಿ: ಮೂರು ಮಂದಿ ವಿದ್ಯಾರ್ಥಿಗಳ ಮೇಲೆ ದಾಳಿ
 

0
IMG-20230601-WA0025.jpg

ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್’ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ.

ಖಾಸಗಿ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಇದರಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ಸು ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.”

Leave a Reply

Your email address will not be published. Required fields are marked *

You may have missed

error: Content is protected !!