August 12, 2026

ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಗೋವಿಂದರಾಜ್, ನಜೀರ್ ಅಹ್ಮದ್ ನೇಮಕ
 

0
IMG-20230529-WA0002.jpg


ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರನ್ನು ನೇಮಕ ಮಾಡುವ ಮೂಲಕ ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡಲಾಗಿದೆ.

ಇನ್ನು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಚುನಾವಣಾ ನೀತಿ ರೂಪಿಸಿದ್ದ ಸುನೀಲ್​​ ಕನುಗೋಳು ಅವರನ್ನು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನ‌ದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!