August 12, 2026

ಕೈ ಕಾಲುಗಳು, ರುಂಡವಿಲ್ಲದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

0
image_editor_output_image-1906358613-1685682457664.jpg

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೈ ಕಾಲುಗಳು ಹಾಗೂ ರುಂಡವಿಲ್ಲದ 52 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ದೃಶ್ಯಗಳನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ನಗರದ ಹೊರವಲಯದ ಬನ್ನೇರುಘಟ್ಟದಲ್ಲಿ ಈ ಘಟನೆ ನಡೆದಿದ್ದು, ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.

ಮೃತರನ್ನು ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ಗೀತಾ ಎಂದು ಗುರುತಿಸಲಾಗಿದ್ದು, ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರು ವರ್ಷಗಳ ಹಿಂದೆ ಪತಿ ತೀರಿಕೊಂಡ ನಂತರ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾದ ನಂತರ ಅವರು ಒಂಟಿಯಾಗಿ ವಾಸಿಸುತ್ತಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!