August 12, 2026

ಕಡಬ, ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ಹಾವಾಳಿ: ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಕಾಡಾನೆ ದಾಳಿ

0
image_editor_output_image260441416-1685683019116.jpg

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ,ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ಹಾವಾಳಿ ತೀವೃಗೊಂಡಿದ್ದು ಜನ ಭಯ ಭೀತರಾಗಿದ್ದಾರೆ.ಇದೀಗ ಈ ಭಾಗದಲ್ಲಿ ಸಂಚರಿಸುತ್ತಿರುವ ವಾಹನಗಳ ಮೇಲೂ ಕಾಡಾನೆ ದಾಳಿ ಮಾಡಲು ತೊಡಗಿದ್ದು ಆತಂಕ ಇನ್ನೂ ಹೆಚ್ಚಾಗಿದೆ.

ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಇಲ್ಲಿನ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿತ್ತು.

ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆ ಕಂಡು ಅನಾಹುತ ತಪ್ಪಿಸಲು ಪ್ರಯತ್ನಿಸಿದ್ದಾರೆ.

ಆದರೂ ಒಂಟಿ ಸಲಗ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ ಎನ್ನಲಾಗಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!