March 25, 2026

ಮೈಸೂರು | ಇನೋವಾ ಕಾರು, ಖಾಸಗಿ ಬಸ್ ಅಪಘಾತ ಪ್ರಕರಣ: ಮತ್ತೋರ್ವ ವ್ಯಕ್ತಿ ಸಾವು, ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

0
image_editor_output_image2060224749-1685683377020.jpg

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಇಲ್ಲಿನ ಕೆ.ಆರ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದೀಪ್ (24) ಶುಕ್ರವಾರ ನಿಧನರಾದರು.

ಅವರ ತಾಯಿ ಸರೋಜಾ ಹಾಗೂ ತಂದೆ ಕೊಟ್ರೇಶ್ ಅಪಘಾತದಲ್ಲಿ ಮೃತರಾಗಿದ್ದರು. ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದರು.

ಸೋಮವಾರ ಮಧ್ಯಾಹ್ನ ಅಪಘಾತ ಸಂಭವಿಸಿತ್ತು. ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದವರು ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!