November 13, 2024

ಬಂಟ್ಟಾಳ: ಎರಡನೇ ವಿವಾಹವಾದ ಪತ್ನಿ: ನ್ಯಾಯಾಲಯದ ಮೆಟ್ಟಿಲೇರಿದ ಪತಿ

0

ಬಂಟ್ವಾಳ : ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹದ ಬಗ್ಗೆ ಪತಿ ನ್ಯಾಯಾಲಯಕ್ಕೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಪೊಲೀಸ್ ಠಾಣೆಗೆ ಆದೇಶಿಸಲಾಗಿರುವ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್ ಅವರು ಈ ಬಗ್ಗೆ ನ್ಯಾಯಾಲಯಕ್ಕೆ ದೂರು ನೀಡಿದ್ದು, ಬೆಳ್ತಂಗಡಿ ಸಿಜೆ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಆದೇಶಿಸಿದೆ.

ಉದಯ ನಾಯಕ್ ಅವರು ಅನಿತಾ ನಾಯಕ್ ಎಂಬುವವರನ್ನು ೨೦೧೮ರಲ್ಲಿ ಮದುವೆಯಾಗಿದ್ದು, ಮದುವೆ ಬಳಿಕ ಜೂನ್ 2020 ರ ತನಕ ಇಬ್ಬರೂ ಒಟ್ಟಿಗೆ ಇದ್ದರು. ಬಳಿಕ ಹಲವಾರು ಅಡೆತಡೆಗಳು ಬಂದಿದ್ದರಿಂದ ಉದಯ ನಾಯಕ್ ಡೈವೋರ್ಸ್ ಪಿಟಿಷನ್ ಸಲ್ಲಿಸಿದ್ದರು. ಈ ಪ್ರಕರಣವು ವಿಚಾರಣೆಯಲ್ಲಿರುವಾಗಲೇ ಅನಿತಾ ಅವರು ಹರಿಕೃಷ್ಣ ಗಣಪತ್ ರಾವ್ ಕೀಳು ಎಂಬವರ ಜತೆ ವಿವಾಹವಾಗಿರುವುದಾಗಿ ಉದಯ ನಾಯಕ್ ಆರೋಪಿಸಿದ್ದಾರೆ.ಈ ಮದುವೆಯು ಕಾನೂನು ಬಾಹಿರವಾಗಿದ್ದರಿಂದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈ ಗೊಳ್ಳಬೇಕಾಗಿ ಕೋರಿದ್ದಾರೆ. ಪುಂಜಾಲಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.”

Leave a Reply

Your email address will not be published. Required fields are marked *

error: Content is protected !!