August 12, 2026

ಕಡಬ: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು
 

0
ms-210522-death.jpg

ಕಡಬ : ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ. 02 ರ ಶುಕ್ರವಾರದಂದು ನೆಟ್ಟಣ ಎಂಬಲ್ಲಿ ನಡೆದಿದೆ.

ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.

ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದಾರೆ, ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!