ಒಡಿಶಾ: ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: ಹಲವರಿಗೆ ಗಾಯ
ಒಡಿಶಾ: ಇಲ್ಲಿನ ಬಾಲಸೋರ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಘಟನೆ ನಡೆದಿದೆ.
ಹಲವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ 4 ಬೋಗಿಗಳು ಹಳಿಯಿಂದ ಉರುಳಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ರಕ್ಷಣಾ ತಂಡಗಳು ಧಾವಿಸಿವೆ.
ಒಡಿಶಾದ ವಿಶೇಷ ಪರಿಹಾರ ಆಯುಕ್ತರ ಕಚೇರಿತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತೆರಳಿವೆ. ಬಾಲಸೋರ್ ಕಲೆಕ್ಟರ್ ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ SRC ಗೆ ತಿಳಿಸಲು ಸ್ಥಳಕ್ಕೆ ತಲುಪಲು ಸೂಚಿಸಲಾಗಿದೆ ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




